ವಿಶ್ವ ವಿಖ್ಯಾತ ಹಂಪಿಯಲ್ಲಿ ಇಂದಿನಿಂದ 3 ದಿನಗಳ ಕಾಲ ಹಂಪಿ (HAMPI) ಉತ್ಸವ ಆರಂಭವಾಗಲಿದೆ. ಇಂದು ಸಂಜೆ 5.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ( BASAVARAJ BOMMAI) ಯವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಆನಂದ್ ಸಿಂಗ್, ಶ್ರೀರಾಮುಲು ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.ಕಾರ್ಯಕ್ರಮ ಹಿನ್ನೆಲೆ ಹಂಪಿಯ ಎಲ್ಲಾ ಸ್ಮಾರಕಗಳಿಗೆ ದೀಪಾಲಂಕಾರ ಮಾಡಲಾಗಿದೆ. ಉತ್ಸವಕ್ಕೆ ನಾಲ್ಕು ವೇದಿಕೆಗಳನ್ನು ಸಿದ್ಧಪಡಿಸಲಾಗಿದೆ. ಇದನ್ನು ಓದಿ :- ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗುವುದು ನಿಶ್ಚಿತ- ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ – ಸಿ.ಎಂ.ಇಬ್ರಾಹಿಂ
ಬಾಲಿವುಡ್ ಮತ್ತು ಸ್ಯಾಂಡಲ್‌ವುಡ್ (SANDALWOOD)ಸೇರಿದಂತೆ ಸುಮಾರು 6,000 ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಟಿ ವೆಂಕಟೇಶ್ ಮಾತನಾಡಿ, ಉತ್ಸವಕ್ಕೆ ಸುಮಾರು 9 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದ್ದು, ಸುಮಾರು 15 ಕೋಟಿ ರೂ ವೆಚ್ಚವಾಗಲಿದೆ. ಜಲಕ್ರೀಡೆ, ಕುಸ್ತಿ, ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಮತ್ತು ಧ್ವನಿ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆಯಾಗಲಿವೆ.
ಇದನ್ನು ಓದಿ :- ನಳೀನ್ ಕುಮಾರ್ ಕಟೀಲ್ ಗೆ ಟ್ವೀಟ್ ಮೂಲಕ ಟಾಂಗ್ ಕೊಟ್ಟ ಕಾಂಗ್ರೆಸ್