ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಮಂಗಳವಾರ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ. 6ವರ್ಷಗಳು ಕಳೆದರೂ ಸಾರಿಗೆ ನೌಕರರಿಗೆ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ.
ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದಿದ್ದಾರೆ. ಜತೆಗೆ ಪುನಃ ಬೀದಿಗಿಳಿದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಸಿದ್ಧರಾಗಿದ್ದು, ಜನವರಿ 24ರಂದು ಸಾರಿಗೆ ನೌಕರರು ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಹೀಗಾಗಿ ಮಂಗಳವಾರ ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ. ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021ರ ಏಪ್ರಿಲ್ನಲ್ಲಿ ನೌಕರರು 15 ದಿನಗಳ ಕಾಲ ಮುಷ್ಕರ ನಡೆಸಿದ್ದರು. ಆದರೂ ಇಲ್ಲಿಯವರೆಗೆ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಏಣಿಸುತ್ತಿದೆ. ಇದನ್ನು ಓದಿ :- ಟಿ. ನರಸೀಪುರ ತಾಲೂಕಿನಲ್ಲಿ ನಿಲ್ಲದ ಚಿರತೆ ಹಾವಳಿ – 11 ವರ್ಷದ ಬಾಲಕ ಸಾವು
ಹೀಗಾಗಿ ಮತ್ತೆ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲು ಪ್ಲ್ಯಾನ್ ಮಾಡಿದೆ. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು 6 ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಇಲ್ಲ. ನಿಯಮಬದ್ಧವಾಗಿ 2020 ಮಾರ್ಚ್ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು. ಹೀಗಾಗಿ ನಿಗಮಗಳ ನಿರ್ಧಾರಕ್ಕೆ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1,20,000 ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2016ರಲ್ಲಿ ಶೇ 12.5ರಷ್ಟು ವೇತನ ಪರಿಷ್ಕರಣೆ ಆಗಿತ್ತು. ಆದರೆ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ನಡೆಸಿ ಒಂದೂವರೆ ವರ್ಷ ಕಳೆದರೂ ಬೇಡಿಕೆಯನ್ನು ಸರ್ಕಾರ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸತ್ಯಾಗ್ರಹಕ್ಕೆ ಸಿದ್ಧತೆಯನ್ನು ನೌಕರರು ಮಾಡಿಕೊಂಡಿದ್ದಾರೆ.
ಇದನ್ನು ಓದಿ :- ಅಧ್ಯಕ್ಷ…ಅಧ್ಯಕ್ಷ…ಹಾಡಿಗೆ ಹೆಜ್ಜೆ ಹಾಕಿದ ಶ್ರೀ ರಾಮುಲು