ಎಲಾನ್ ಮಸ್ಕ್ ತೆಕ್ಕೆಗೆ ಟ್ವಿಟ್ಟರ್ – CEO ಪರಾಗ್ ಅಗರ್ವಾಲ್ ಸೇರಿದಂತೆ ಪ್ರಮುಖರು ವಜಾ

ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್(Elon Musk) ಟ್ವಿಟ್ಟರ್ ಕಂಪನಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಸಿಇಒ ಪರಾಗ್ ಅಗರ್ವಾಲ್ ಮತ್ತು ಕೆಲ ಉನ್ನತ ಅಧಿಕಾರಿಗಳನ್ನು ವಜಾಗೊಳಿಸಿದ್ದಾರೆ.

ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್(Elon Musk) ಟ್ವಿಟ್ಟರ್ ಕಂಪನಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಸಿಇಒ ಪರಾಗ್ ಅಗರ್ವಾಲ್ ಮತ್ತು ಕೆಲ ಉನ್ನತ ಅಧಿಕಾರಿಗಳನ್ನು ವಜಾಗೊಳಿಸಿದ್ದಾರೆ.

https://twitter.com/elonmusk/status/1585841080431321088?ref_src=twsrc%5Etfw%7Ctwcamp%5Etweetembed%7Ctwterm%5E1585841080431321088%7Ctwgr%5E4f63e03cca5f746faa56db8ec29127962232394c%7Ctwcon


ಟ್ವಿಟರ್(Twitter) ಸಿಇಒ ಪರಾಗ್ ಅಗರ್ವಾಲ್(Parag Agarwal) ಜೊತೆ ಕಾನೂನು, ನೀತಿ ಮತ್ತು ಟ್ರಸ್ಟ್ ಮುಖ್ಯಸ್ಥರಾದ ವಿಜಯ ಗದ್ದೆ, ಮುಖ್ಯ ಹಣಕಾಸು ಅಧಿಕಾರಿ ನೆಡ್ ಸೆಗಲ್ ಸೇರಿದಂತೆ ಪ್ರಮುಖರನ್ನು ವಜಾ ಮಾಡಲಾಗಿದೆ ಎನ್ನಲಾಗಿದೆ. ಕಂಪನಿಯ ಸಿಇಒ ಜಾಕ್ ಡೋರ್ಸೆ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾರತೀಯ ಮೂಲದ ಪರಾಗ್ ಅಗರ್ವಾಲ್ ಕಂಪನಿಯ ಸಿಇಒ ಸ್ಥಾನವನ್ನು ಅಲಂಕರಿಸಿದ್ದರು. ಇದನ್ನೂ ಓದಿ : –  ಚಾಲಕನ ನಿಯಂತ್ರಣ ತಪ್ಪಿ ಲಾರಿ ಮರಕ್ಕೆ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರನ್ನು ಟ್ವಿಟ್ಟರ್ನಿಂದ ಶಾಶ್ವತವಾಗಿ ಗೇಟ್ಪಾಸ್ ನೀಡುವ ಸಂಬಂಧ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಜಯ ಗದ್ದೆ ಪ್ರಮುಖ ಪಾತ್ರ ವಹಿಸಿದ್ದರು. ಟ್ವಿಟ್ಟರ್ ಕಂಪನಿ ತಮ್ಮ ತೆಕ್ಕೆ ಬಂದ ಬೆನ್ನಲ್ಲೇ ಮಸ್ಕ್ ಹಕ್ಕಿ ಈಗ ಮುಕ್ತವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : – ಇಂದು ಕೋಟಿ ಕಂಠ ಗಾಯನ – 1.15 ಕೋಟಿ ಜನರಿಂದ ನೋಂದಣಿ, ಜನಮನ ಸೆಳೆದ ವಿನೂತನ ಅಭಿಯಾನ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!