ಮಹಾರಾಷ್ಟ್ರದಲ್ಲಿ ಶಿವಸೇನೆಯಲ್ಲಿ ಬಿಕ್ಕಟ್ಟು ತಲೆದೋರಿದೆ. ಇದಕ್ಕೆ ಇಂಬು ನೀಡುವಂತೆ ಇದೀಗ ಶಿವಸೇನೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddav thackery) ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಏಕನಾಥ್ ಶಿಂಧೆ (Ekhnath sindhe) ಕೆಲ ಶಾಸಕರೊಂದಿಗೆ ಗುಜರಾತ್ ಹೋಟೆಲ್ ವೊಂದರಲ್ಲಿ ತಂಗಿದ್ದಾರೆಂದು ಹೇಳಲಾಗುತ್ತಿದೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಪಕ್ಷದ ಎಲ್ಲಾ ಶಾಸಕರೊಂದಿಗೆ ತುರ್ತುಸಭೆ ಕರೆದಿದ್ದಾರೆ. ಏಕನಾಥ್ ಶಿಂಧೆಯವರು ಸೋಮವಾರ ಸಂಜೆಯಿಂದಲೂ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಅವರೊಂದಿಗೆ ಹಲವು ಶಾಸಕರೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ : – ಮೈಸೂರಿನಲ್ಲಿ 15 ಸಾವಿರ ಮಂದಿಯೊಂದಿಗೆ ಮೋದಿ ಯೋಗ
20-25 ಮಂದಿ ಶಾಸಕರೊಂದಿಗೆ ಏಕನಾಥ್ ಶಿಂಧೆ ಸೂರತ್ ನಲ್ಲಿರುವ ಹೋಟೆಲ್ ಲೆ ಮೆರಿಡಿಯನ್ (LI MERIDIAN Hotel )ನಲ್ಲಿ ತಂಗಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಶಿವಸೇನೆ ಶಾಸಕ ಮತ್ತೊಂದು ಸಭೆ ನಿಗದಿಯಾಗಿದೆ. ಈ ಸಭೆಗೆ ಎಷ್ಟು ಶಾಸಕರು ಹಾಜರಾಗುತ್ತಾರೆ ಎಂಬುದರ ಮೇಲೆ ಮಹಾವಿಕಾಸ್ ಅಘಾಡಿಯ ಭವಿಷ್ಯ ನಿಂತಿದೆ.
ಇದನ್ನೂ ಓದಿ : – ಮೈಸೂರಿನ ಪರಂಪರೆಯನ್ನ ಕೊಂಡಾಡಿದ ಮೋದಿ – ಕನ್ನಡದಲ್ಲಿ ಮಾತು ಆರಂಭಿಸಿ ಜನರನ್ನ ಹುರಿದುಂಬಿಸಿದ ಪ್ರಧಾನಿ