ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ (vidhana parishat ) ಏಳು ಸ್ಥಾನಗಳಿಗೆ ದಿನಾಂಕ: 03-06-2022 ರಂದು ನಿಗಧಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಚುನಾವಣಾಧಿಕಾರಿ ( electionofficer) ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಆದ ಶ್ರೀಮತಿ ವಿಶಾಲಾಕ್ಷಿ ( vishalakshi ) ಅವಿರೋಧ ಆಯ್ಕೆಯನ್ನ ಘೋಷಿಸಿದ್ದಾರೆ.
ಮೇ 24 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. 25 ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ ಏಳು ಅಭ್ಯರ್ಥಿಗಳು ಮಾತ್ರ ಅಂತಿಮ ಕಣದಲ್ಲಿ ಉಳಿದಿದ್ದ ಕಾರಣಕ್ಕೆ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ (lakshmana savadi ) , ಟಿ. ನಾರಾಯಣ ಸ್ವಾಮಿ, ಶ್ರೀಮತಿ ಹೇಮಾಲತಾ ನಾಯಕ್ ಹಾಗೂ ಕೇಶವ ಪ್ರಸಾದ.ಎಸ್. ಭಾರತೀಯ ಕಾಂಗ್ರೆಸ್ ಪಕ್ಷದಿಂದ ಕೆ.ಅಬ್ದುಲ್ ಜಬ್ಬಾರ್ ಹಾಗೂ ಎಮ್. ನಾಗರಾಜು. ಜೆಡಿಎಸ್ ಪಕ್ಷದಿಂದ ಶರವಣ.ಟಿ (T. sharavana ) ಅವರು ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಾಗಿದ್ದಾರೆ. ಇದನ್ನೂ ಓದಿ : – ದಾವೋಸ್ ನಲ್ಲಿ ಕರ್ನಾಟಕ ದೊಡ್ಡ ಮಟ್ಟದಲ್ಲಿ ಆಕರ್ಷಣೆ ಮಾಡಿದೆ – ಸಿಎಂ ಬೊಮ್ಮಾಯಿ