ಕೂಲಿ ಕಾರ್ಮಿಕರಿಗೆ ವಾಹನ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕರಿಗೆ ವಾಹನ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರದ ಬಳಿ ನಡೆದಿದೆ.

ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕರಿಗೆ ವಾಹನ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್ ( ANIKAL ) ತಾಲೂಕಿನ ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರದ ಬಳಿ ನಡೆದಿದೆ.

ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಮೂವರು ಕಾರ್ಮಿಕರಿಗೆ ಈಚರ್ ವಾಹನ ಡಿಕ್ಕಿ ಹೊಡೆದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟಿರುವ ಕಾರ್ಮಿಕರು ಅಸ್ಸಾಂ ಮೂಲದವರು. ಕೆಲಸ ಮುಗಿಸಿ ಕಾರ್ಮಿಕರು ರಸ್ತೆ ಬಳಿ ನಡೆದುಕೊಂಡು ಮನೆಗೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವಾಹನ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ವಾಹನ ಚಾಲಕ ಅಪಘಾತ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗದ ಬಿಡಿ ಭಾಗಗಳು ಬಿದ್ದಿರುವುದನ್ನು ನೋಡಿ ಸ್ಥಳೀಯರು ಕೂಡಲೇ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ವಾಹನ ಸಮೇತ ಪರಾರಿಯಾಗಿರುವ ಚಾಲಕನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದನ್ನು ಓದಿ : –  ಅಪ್ಪ-ಮಕ್ಕಳು, ಅಣ್ತಮ್ಮಂದಿರಿಗೆ ಟಿಕೆಟ್ ಸಿಗಲ್ಲ – ಬಸನಗೌಡ ಪಾಟೀಲ್ ಯತ್ನಾಳ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!