ನಾಲ್ಕು ಪರಿಷತ್ ಚುನಾವಣೆಯಲ್ಲಿ (Parishath election) ನಮ್ಮ ಗೆಲವು ನಿಶ್ಚಿತ ಎಂದು ಸಿಎಂ ಬೊಮ್ಮಾಯಿ (Bommai) ಹೇಳಿದ್ದಾರೆ . ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು ದೇಶದಲ್ಲಿ ವಿವಿಧೆಡೆ ನಡೆಯುತ್ತಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.
ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ಸೂಚಿಸಲಾಗಿದೆ. ಆಯಾ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಸೌಹಾರ್ದತೆ ಕಾಪಾಡಬೇಕೆಂದು ತಿಳಿಸಲಾಗಿದೆ. ಈ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜತೆಗೆ ಚರ್ಚೆ ಮಾಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
ಇದೇ ವೆಳೆ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಆಸಿಡ್ ದಾಳಿ ನಡೆದಿರುವುದು ದುರದೃಷ್ಟಕರ. ಅಂತವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ. ಉತ್ತರ ಪ್ರದೇಶದಂತ ಘಟನೆಗಳು ನಮ್ಮಲ್ಲಿ ನಡೆದಿಲ್ಲ. ನಮ್ಮ ರಾಜ್ಯ ಶಾಂತವಾಗಿದೆ. ಶೂಟ್ ಅಟ್ ಸೈಟ್ ಕ್ರಮದ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ರಾಯಚೂರು (Raichuru) ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ಪ್ರಕರಣ ಬಗ್ಗೆ ಈಗಾಗಲೇ ತನಿಖೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನ ಅಮಾನತು ಮಾಡಲಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಇದನ್ನೂ ಓದಿ : – ಒಂದು ವಾರದ ವರೆಗೂ ನಾನು ಯಾರನ್ನು ಭೇಟಿ ಮಾಡುವುದಿಲ್ಲ – ಕುಮಾರಸ್ವಾಮಿ