ಬೆಳಗಾವಿ (Belagavi) ಯಲ್ಲಿ ಪಂಚಮಸಾಲಿ (Panchamasali) ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಇಂದು ಬೃಹತ್ ಹೋರಾಟ ನಡೆಯಲಿದೆ. ಸುವರ್ಣಸೌಧ (Suvarnasoudha) ಬಳಿ ಪಂಚಮ ಕಹಳೆ ಮೊಳಗಲಿದೆ. ಬೆಳಗಾವಿಯಲ್ಲಿ ವಿರಾಟ ಪಂಚಶಕ್ತಿ ಸಮಾವೇಶ ನಡೆಯಲಿದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯಲು ಸರ್ಕಾರಕ್ಕೆ ಇಂದು ಅಂತಿಮ ದಿನದ ಗಡುವು ನೀಡಲಾಗಿತ್ತು. ಮಾಡು ಇಲ್ಲವೇ ಮೀಸಲಾತಿ ಪಡೆದು ಮಡಿ ಘೋಷವಾಕ್ಯದಡಿ ಸಮಾವೇಶ ನಡೆಯಲಿದೆ.
ಬಸ್ತವಾಡ ಗ್ರಾಮದ ರಾಘವೇಂದ್ರ ಲೇಔಟ್ ನಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ (Aravind bellad) , ಲಕ್ಷ್ಮೀ ಹೆಬ್ಬಾಳ್ಕರ್ (Lakshmi hebbalkar) , ಮಹಾಂತೇಶ ದೊಡ್ಡಗೌಡರ, ಮಹೇಶ್ ಕುಮಟಳ್ಳಿ ,ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಸಚಿವ ವಿಜಯಾನಂದ ಕಾಶಪ್ಪನವರ್, ವಿನಯ್ ಕುಲಕರ್ಣಿ, ಎ.ಬಿ.ಪಾಟೀಲ್, ಹೆಚ್.ಎಸ್.ಶಿವಶಂಕರ ಸೇರಿ ಪಂಚಮಸಾಲಿ ಸಮುದಾಯದ ಹಲವು ನಾಯಕರು ಭಾಗಿಯಾಗಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಹಿರೇಬಾಗೇವಾಡಿಯಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪಾದಯಾತ್ರೆ ಆರಂಭವಾಗಿದೆ. ಹಿರೇಬಾಗೇವಾಡಿಯ ಬಸವೇಶ್ವರ ವೃತ್ತದಿಂದ ಸಮಾವೇಶ ಸ್ಥಳದವರೆಗೆ ಪಾದಯಾತ್ರೆ ನಡೆಯಲಿದೆ. ಇದನ್ನು ಓದಿ : – ಪ್ರಿಯಾಂಕ್ ಖರ್ಗೆ ಬಳಸಿದ ‘ಉಡಾಫೆ’ ಪದಕ್ಕೆ ಕೆರಳಿದ ಎಸ್.ಟಿ ಸೋಮಶೇಖರ್ – ಸದನದಲ್ಲಿ ವಾಕ್ಸಮರ
ಪಾದಯಾತ್ರೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹ ಭಾಗಿಯಾಗುವ ಸಾಧ್ಯತೆಯಿದೆ. ಮಧ್ಯಾಹ್ನ 1.30ಕ್ಕೆ ಸುವರ್ಣಸೌಧದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಸಿಹಿ ಸುದ್ದಿ ನೀಡಿದ್ರೆ ಸಿಎಂ ಬಸವರಾಜ್ ಬೊಮ್ಮಾಯಿಗೆ ಸನ್ಮಾನ ಮಾಡಲಿದ್ದಾರೆ. ಬೊಮ್ಮಾಯಿಗೆ ಡೈಮಂಡ್ ಕಲ್ಲುಸಕ್ಕರೆಯ ತುಲಾಭಾರಕ್ಕೆ ನಿರ್ಧಾರ ಮಾಡಿದ್ದಾರೆ. ಇಲ್ಲವಾದ್ರೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ.
ಇದನ್ನು ಓದಿ : – ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ