ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ( B.S YEDIURAPPA ) ದೆಹಲಿಗೆ ಆಗಮಿಸಿದ್ದರು. ಸಭೆಗೂ ಮುನ್ನ ಮಾತನಾಡಿದ ಅವರು, ಚುನಾವಣಾ ದೃಷ್ಟಿ ಹಿನ್ನೆಲೆ ಪ್ರಮುಖ ನಾಯಕರ ಸಭೆ ಕರೆಯಲಾಗಿದೆ. ಮುಂಬರುವ ಚುನಾವಣೆಗಳ ಬಗ್ಗೆ ಚರ್ಚೆ ಮಾಡಲಾಗುತ್ತೆ. ಈಗಾಗಲೇ ಕರ್ನಾಟಕ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಂಡಿದ್ದೇವೆ.
ಕರ್ನಾಟಕದಲ್ಲಿ 140 ಸ್ಥಾನಗಳನ್ನ ಗೆಲ್ಲಲಿದ್ದೇವೆ. ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಬಿಜೆಪಿ (BJP)ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಜನಪ್ರಿಯ ಬಜೆಟ್ ಮಂಡಿಸಲು ಸಹ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ. ರಾಜ್ಯದಲ್ಲಿ ಪ್ರಿಯಾಂಕಾ ಗಾಂಧಿ ಸಮಾವೇಶ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ 70 ವರ್ಷ ಆಡಳಿತದಲ್ಲಿ ಇತ್ತು. ಆಗ ಏನು ಮಾಡದವರು, ಈಗ ಏನು ಮಾಡ್ತಾರೆ ಎಂದು ಹೇಳಿದರು.
ಇದನ್ನು ಓದಿ :- ಮಹಿಳಾ ಯೋಜನೆಗಳ ಬಗ್ಗೆ ಜಾಹಿರಾತು ಪ್ರಕಟಿಸಿದ ಬಿಜೆಪಿ ಸರ್ಕಾರ