ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಹೊರಟಿರುವ ಬಿಜೆಪಿ (BJP) ಗರೇ, ನಾವೆಲ್ಲರೂ ಭಾರತೀಯರು ಎಂದು ಹೇಳುತ್ತೀರಲ್ಲವೇ? ಬೆಳಗಾವಿ (Belagavi) ಅಲ್ಲಿದ್ದರೇನು? ಇಲ್ಲಿದ್ದರೇನು? ಎಂದೂ ಹೇಳಿಬಿಡಿ ಎಂಬುದಾಗಿ ಮಹಾರಾಷ್ಟ್ರ (Maharastra) ಗಡಿ ವಿವಾದದ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD.Kumarswamy) ಕಿಡಿಕಾರಿದ್ದಾರೆ.
ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ಕುರಿತು ಅಲ್ಲಿನ ಮುಖ್ಯಮಂತ್ರಿ ಏಕನಾಥ ಶಿಂಧೆ (Eknath shinde) ಅವರು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಸ್ತಾಪ ಇಟ್ಟಿದ್ದರಿಂದ ಪುನಃ ಸರ್ವಪಕ್ಷ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bomamai) ಪ್ರತಿಕ್ರಿಯೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಗೋಡಂಬಿ, ಬಾದಾಮಿ ಕೊಟ್ಟು ಕಳುಹಿಸುವುದಕ್ಕೆ ಸರ್ವಪಕ್ಷ ಸಭೆಯನ್ನೇಕೆ ಕರೆಯುತ್ತೀರಿ? ಎರಡೂ ಕಡೆ ನಿಮ್ಮದೇ ಸರ್ಕಾರ ಇದೆ. ಹೀಗಾಗಿ ನೀವು ಅಲ್ಲಿಯೇ ಮಾತನಾಡಿಕೊಳ್ಳಿ. ವಿರೋಧ ಪಕ್ಷಗಳನ್ನು ಕರೆದು ಏನು ಮಾಡುತ್ತೀರಿ? ಇದು ನಿಮ್ಮ ಜವಾಬ್ದಾರಿ, ಅಲ್ಲೂ ನಿಮ್ಮದೆ ಜವಾಬ್ದಾರಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಿಎಂಗೆ ಕಿವಿಮಾತು ಹೇಳಿದ್ದಾರೆ.
ಇದನ್ನೂ ಓದಿ : – ವೋಟರ್ ಐಡಿ ಅಕ್ರಮ – ನೋಟ್ ಪ್ರಿಂಟ್ ಮಾಡಿದ್ದಷ್ಟೇ ದೊಡ್ಡ ಅಪರಾಧ – ಡಿಕೆಶಿ