CinemaState News

ಅ.6ರಂದು ಧ್ರುವ ಸರ್ಜಾ ಹುಟ್ಟುಹಬ್ಬ: ಕೇಕ್‌, ಹಾರಗಳ ಬದಲಿಗೆ ಪುಸ್ತಕ ತರುವಂತೆ ಅಭಿಮಾನಿಗಳಿಗೆ ಮನವಿ

ಬೆಂಗಳೂರು: ಸ್ಯಾಂಡಲ್‌ ವುಡ್‌ ನಟರ ಹುಟ್ಟುಹಬ್ಬ ಬಂತು ಅಂದರೆ ಸಾಕು ಅಭಿಮಾನಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಯಾಗುತ್ತದೆ. ಹುಟ್ಟುಹಬ್ಬ ದಿನ ರಾತ್ರಿಯಿಂದಲೇ ನಟರ ಮನೆಯ ಮುಂದೆ ಕೇಕ್‌ ಕಟ್‌ ಮಾಡಿ ಸಂಭ್ರಮ ಆಚರಣೆ ಮಾಡುತ್ತಾರೆ.

ಈ ಹಿಂದೆ ಸುದೀಪ್‌, ದರ್ಶನ್‌ ಸೇರಿದಂತೆ ಕೆಲವರ ಹುಟ್ಟುಹಬ್ಬಕ್ಕೆ ಕೇಕ್, ಹಾರ ತರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದೀಗ ಸ್ಯಾಂಡಲ್‌ ವುಡ್‌ ನಟ ಮತ್ತೊಬ್ಬ ನಟನ ಹುಟ್ಟುಹಬ್ಬದ ಬರ್ತಾ ಇದೆ. ಹೀಗಾಗಿ ಅಭಿಮಾನಿಗಳು ಹುಟ್ಟುಹಬ್ಬ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಹೌದು ನಟ ಧ್ರುವ ಸರ್ಜಾ ಅವರ ಅಕ್ಟೋಬರ್ 6ರಂದು ಹುಟ್ಟುಹಬ್ಬವನ್ನು ಈ ಬಾರಿ ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳಲು ಸಜ್ಜಾಗಿದ್ದಾರೆ. ಆದರೆ ಇದೀಗ ಧ್ರುವ ಸರ್ಜಾ ಅಭಿಮಾನಿಗಳಿಗಾಗಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬಕ್ಕೆ ಬರುವವರು ಕೇಕ್, ಹಾರ, ತುರಾಯಿಗಳನ್ನು ತರಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಹುಟ್ಟುಹಬ್ಬದ ಹಿಂದಿನ ರಾತ್ರಿ ಧ್ರುವ ಮನೆಯ ಮುಂದೆಯೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಅಂದು ಅಭಿಮಾನಿಗಳು ಶಾಲಾ ಮಕ್ಕಳಿಗೆ ಬೇಕಾಗುವ ಸಾಮಗ್ರಿಗಳನ್ನು ಉಡುಗೊರೆ ರೂಪದಲ್ಲಿ ಕೊಡುವಂತೆ,. ಪುಸ್ತಕ, ಬ್ಯಾಗ್, ಪೆನ್ನು ಹೀಗೆ ಅಗತ್ಯ ವಸ್ತುಗಳನ್ನು ಮಾತ್ರ ತನ್ನಿ ಎಂದು ಮನವಿ ಮಾಡಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!