ಬೆಂಗಳೂರು : ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಶ್ರೀಮತಿ ಸ್ಪಂದನ ವಿಜಯ ರಾಘವೇಂದ್ರ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಸ್ಪಂದನ ಅವರು ಸಾವನ್ನಪ್ಪಿರುವುದು ದುರಾದೃಷ್ಟಕರ. ವಿಜಯ ರಾಘವೇಂದ್ರ ಅವರ ಸಂಕಷ್ಟದ ಈ ಸಮಯದಲ್ಲಿ ಅವರಿಗೆ ಆ ಭಗವಂತನು ಧೈರ್ಯ ತುಂಬಲಿ.
ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಚಿವ ಶಿವರಾಜ್ ತಂಗಡಗಿ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.