ಬೆಂಗಳೂರು: ತಂದೆಯೇ ಮಗನನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಬೆಂಗಳೂರಿನ ಕರೆಕಲ್‍ನಲ್ಲಿ ನಡೆದಿದೆ. ನರ್ತನ್ ಬೋಪಣ್ಣ (32) ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನರ್ತನ್ ಬೋಪಣ್ಣ (32) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಅವರ ತಂದೆ ಸುರೇಶ್ ವಿನಾಕಾರಣ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದ ಅವರನ್ನು ಕೂಡಲೇ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.