ಬೆಂಗಳೂರು : ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರು ಸಮರ ಮುಂದುವರೆದಿದೆ. ಕ್ಯಾಬ್ ಡ್ರೈವರ್ಗಳ ಸೋಗಿನಲ್ಲಿ ಗಾಂಜಾ ಮಾರುಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ವಿಜಯ್ ಕುಮಾರ್, ವಿಜಯ್ ಕುಮಾರ್ ಬಂಧಿತ ಆರೋಪಿಗಳು, ಯಾದಗಿರಿ, ವಿಜಯಪುರದಿಂದ ಸಿಲಿಕಾನ್ ಸಿಟಿಯಲ್ಲಿ ಕ್ಯಾಬ್ ಓಡಿಸುತ್ತಿದ್ದರು. ಪರಿಚಯವಿರುವ ಗಿರಾಕಿಗಳು, ಕಾಲೇಜು ವಿದ್ಯಾಥಿಗಳು, ಮತ್ತು ಐಟಿ/ಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದರು. ಹೊಸಕೆರೆ ಹಳ್ಳಿ ಬಳಿ ಗಾಂಜಾ ಮಾರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳಿಂದ 25 ಲಕ್ಷ ಮೌಲ್ಯದ 15 ಕೆಜಿ ಗಾಂಜಾ, ಒಂದು ತೂಕದ ಮೆಶಿನ್, ಎರಡು ಮೊಬೈಲ್, ಒಂದು ಕಾರು ಸೀಜ್ ಮಾಡಿದ್ದಾರೆ. ಇನ್ನೂಳಿದ ಆರೋಪಿಗಳಿಗಾಗಿ ಬಲೆ ಬೀಸಿ, ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿ, ತನಿಖೆ ಮುಂದುವರಿಸಿದ್ದಾರೆ.