ಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ ಪೂರೈಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಬೆಂಗಳೂರು ಗ್ರಾಮಾಂತರ ಪೊಲೀಸರು – ಗೃಹ ಸಚಿವರಿಂದ ಅಭಿನಂದನೆ

ಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ ಗಳನ್ನು ಪೂರೈಸುತ್ತಿದ್ದ ಜಾಲವನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಭೇದಿಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಅಧಿಕೃತ ಮಾಹಿತಿಗಳ ಪ್ರಕಾರ, ಈ ಕುರಿತು ತನಿಖೆ ಕೈಗೊಂಡಿದ್ದ ಪೊಲೀಸರು ಹಲವರನ್ನು ಬಂಧಿಸಿ, ದಾಖಲೆಗಳನ್ನು ಅಕ್ರಮ ವಲಸಿಗರಿಗೆ ಪೂರೈಸುತ್ತಿದ್ದ 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರಹದ್ದಿನ ಪ್ರದೇಶವೊಂದರಲ್ಲಿ ಎಟಿಎಂ ಜತೆಗೆ 18 ಲಕ್ಷ ರೂಪಾಯಿಗಳ ಲೂಟಿ ಪ್ರಕರಣ ನಡೆದಿದ್ದು, ಈ ಸಂಬಂಧ ಅಕ್ರಮವಾಗಿ ದೇಶ ನುಸುಳಿದ್ದ ಬಾಂಗ್ಲಾದೇಶಿ ನಾಗರಿಕೊಬ್ಬನನ್ನು ಬಂಧಿಸಲಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ ನಕಲಿ ದಾಖಲೆಗಳನ್ನು ಒದಗಿಸುವ ಜಾಲದ ಬಗ್ಗೆ ಸುಳಿವು ಸಿಕ್ಕಿದ್ದು, ಪೊಲೀಸರು ಸಾಕ್ಷ್ಯಾಧಾರ ಗಳ ಸಮೇತ ಆರೋಪಿತರನ್ನು ವಶಕ್ಕೆ ಪಡೆದಿದ್ದಾರೆ. ನಕಲಿ ದಾಖಲೆ ಪಡೆದು, ಬೆಂಗಳೂರಿನಲ್ಲಿ ವಾಣಿಜ್ಯ ವ್ಯವಹಾರ ನಡೆಸುತ್ತಿದ್ದ ಅಕ್ರಮ ವಲಸಿಗಾರ ಸುಮಾರು 4 ಕೋಟಿ ರೂಪಾಯಿಗಳನ್ನು ಬಾಂಗ್ಲಾದೇಶಿ ಕರೆನ್ಸಿ ಆಗಿ ಪರಿವರ್ತಿಸಿ ಆ ದೇಶಕ್ಕೆ ಈಗಾಗಲೇ ವರ್ಗಾವಣೆ ಗೊಳಿ ಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಬಂಧಿಸಲ್ಪಟ್ಟ ಆರೋಪಿಗಳಲ್ಲಿ ಒಬ್ಬಾತ ಸಾಫ್ಟ್ವೇರ್ ಎಂಜಿನಿಯರ್ ಹಾಗೂ ಇನ್ನೊಬ್ಬ ಫಾರ್ಮಸಿಸ್ಟ್ ಆಗಿದ್ದು ಈಗ ಪೊಲೀಸರ ವಶದಲ್ಲಿದ್ದು ತನಿಖೆ ಎದುರಿಸುತ್ತಿದ್ದಾರೆ. ಬಂಧಿಸಲ್ಪಟ್ಟ ಆರೋಪಿಗಳು, ಹಲವು ವರ್ಷಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದು ಇದೀಗ ಪೊಲೀಸರು ಹೆಣೆದ ಬಲೆಗೆ ಬಿದ್ದಿದ್ದು, ಕಾನೂನು ಕ್ರಮ ಎದುರಿಸುತ್ತಿದ್ದಾರೆ. ಇದನ್ನೂ ಓದಿ : – ಕಾಂಗ್ರೆಸ್ ಬೆಂಬಲಿಸಿದ ಶಾಸಕರಿಗೆ ಧನ್ಯವಾದ – ಡಿ ಕೆ ಶಿವಕುಮಾರ್


ಈ ಕುರಿತು ಮಾತನಾಡಿದ ಗೃಹ ಸಚಿವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರನ್ನು ಅಭಿನಂದಿಸಿದ್ದಾರೆ. “ಅಕ್ರಮ ವಲಸಿಗರು ಹಾಗೂ ಅವರಿಗೆ ಆಶ್ರಯ ಹಾಗೂ ಇನ್ನಿತರ ಸಹಕಾರ ಹಾಗೂ ಸಹಾಯ ವನ್ನು ಒದಗಿಸುತ್ತಿದ್ದವರ ವಿರುದ್ಧ ತೀವ್ರ ನಿಗಾ ವಹಿಸಬೇಕು ಮತ್ತು ಅಕ್ರಮ ಚಟುವಟಿಕೆ ಗಳಿಗೆ ನಿಯಂತ್ರಣ ಹೇರಬೇಕು ಎಂದು ನಿರ್ದೇಶನ ನೀಡಿದ್ದೆ” . ಅಕ್ರಮ ವಲಸೆ ಸಮಸ್ಯೆಯನ್ನು ನಮ್ಮ ಸರಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಅಕ್ರಮ ನೆಲಸಿಗರು ಮತ್ತು ಅವರಿಗೆ ಆಶ್ರಯ ಹಾಗೂ ಇನ್ನಿತರ ಸಹಕಾರ ಒದಗಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ರಾಜ್ಯದ ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿರುವ ವರ ಬಗ್ಗೆ ಸಮೀಕ್ಷೆ ನಡೆಸಿ ಕ್ರಮ ತೆಗೆದುಕೊಳ್ಳಲು ಈಗಾಗಲೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ : –  ಅವನೇನು ಕತ್ತೆ ಕಾಯುತ್ತಿದ್ನಾ..? – ಹೆಚ್.ಡಿ.ಕೆ ವಿರುದ್ದ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಶಾಸಕ ಶ್ರೀನಿವಾಸ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!