Crime News

ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ

ತುಮಕೂರು : ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಜೋಡಗಟ್ಟೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ.

ತಿಪಟೂರು ಮೂಲದ 21 ವರ್ಷದ ಅನಿಲ್ ಕುಮಾರ್, ನರಸಿಂಹ ಮೂರ್ತಿ (21) ಹಾಗೂ ಕಾವ್ಯಾ (19) ಸಾವನ್ನಪ್ಪಿದ್ದಾರೆ.

ಆದಿಚುಂಚನಗಿರಿ ಮಠಕ್ಕೆ ಹೋಗಿ ವಾಪಸಾಗುವಾಗ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮೃತದೇಹಗಳು ಆದಿಚುಂಚನಗಿರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!