ಬಾಗಲಕೋಟೆ : ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಎಂಟು ಮಕ್ಕಳಿಗೆ ಗಾಯವಾದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಲಗೂರ ಗ್ರಾಮದ ಹತ್ತಿರ ರವಿವಾರ ಮಧ್ಯರಾತ್ರಿ 12 ಗಂಟೆಗೆ ನಡೆದಿದೆ. ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಮಕ್ಕಳು ಸ್ಥಳದಲ್ಲಿಯೇ ಮೃತಪಟ್ಟಿದ್ದು.
ಮೃತರು ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು.ಸಾಗರ ಕಡಕೋಳ(17), ಶ್ವೇತಾ(13), ಗೋವಿಂದ(13) ಬಸವರಾಜ(17) ಮೃತಪಟ್ಟ ವಿದ್ಯಾರ್ಥಿಗಳು. ಘಟನೆಯಲ್ಲಿ ಎಂಟು ಮಕ್ಕಳು ಗಾಯಗೊಂಡಿದ್ದಾರೆ.