Crime News

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವ ಅರೆಸ್ಟ್..!

ಬೆಂಗಳೂರು : ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನನ್ನು ಬೆಂಗಳೂರು ಸಿಸಿಬಿ ಪೊಲೀಸರು (CCB Police) ಅರೆಸ್ಟ್ ಮಾಡಿದ್ದಾರೆ. ಶಶಾಂಕ್(26) ಬಂಧಿತ ಆರೋಪಿ.

ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ. ಹೀಗಾಗಿ ಸಿಸಿಬಿ ಪೊಲೀಸರು ಶಶಾಂಕ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ.

2015 ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಕೇಸ್, 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ರಾಜಾಜಿನಗರ, ತಿಲಕನಗರದಲ್ಲಿ ಒಂದೊಂದು ಕೊಲೆ ಯತ್ನ ಕೇಸ್​, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಹಾಗೂ ಕೊಲೆಯತ್ನ ಕೇಸ್, ಪುಟ್ಟರೆನಹಳ್ಳಿಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಏಳು ಪ್ರಕರಣಗಳು ಶಶಾಂಕ್ ವಿರುದ್ಧ ಇರೋದು ಬೆಳಕಿಗೆ ಬಂದಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!