Food

ಸುಲಭವಾಗಿ ಪನೀರ್ ಭುರ್ಜಿ ಮನೆಯಲ್ಲಿ ಟ್ರೈ ಮಾಡಿ

ಪನೀರ್ ಸಾಮಾನ್ಯವಾಗಿ ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಪನೀರ್‌ನಿಂದ ವಿವಿಧ ರೀತಿಯ ಅಡುಗೆಗಳನ್ನು ತಯಾರಿಸಬಹುದು. ಮಕ್ಕಳು ಪನೀರ್‌ನಿಂದ ತಯಾರಿಸಲ್ಪಟ್ಟ ತಿನಿಸುಗಳನ್ನು ಇಷ್ಟಪಟ್ಟು ತಿನ್ನುತ್ತಾರೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಸುಲಭವಾಗಿ ಪನೀರ್ ಭುರ್ಜಿ ಯಾವ ರೀತಿ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತಿದ್ದೇವೆ. ಸೈಡ್ ಡಿಶ್ ಆಗಿಯೂ ತಿನ್ನಬಹುದು.

ಬೇಕಾಗುವ ಸಾಮಗ್ರಿಗಳು:

ಪನೀರ್ – 200 ಗ್ರಾಂ
ಎಣ್ಣೆ – 1 ಚಮಚ
ಜೀರಿಗೆ – ಕಾಲು ಚಮಚ
ಹೆಚ್ಚಿದ ಹಸಿರು ಮೆಣಸಿನಕಾಯಿ – 2
ಹೆಚ್ಚಿದ ಈರುಳ್ಳಿ – 1
ಅರಶಿಣ ಪುಡಿ – ಕಾಲು ಚಮಚ
ಗರಂ ಮಸಾಲ ಪುಡಿ – ಅರ್ಧ ಚಮಚ
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಹೆಚ್ಚಿದ ಟೊಮೊಟೊ – 1
ಉಪ್ಪು – ರುಚಿಗೆ ತಕ್ಕಷ್ಟು

ಮಾಡುವ ವಿಧಾನ:
* ಮೊದಲಿಗೆ ಒಂದು ಪ್ಯಾನ್‌ಗೆ ಎಣ್ಣೆ ಹಾಕಿ ಬಿಸಿ ಮಾಡಿಕೊಳ್ಳಿ. ಎಣ್ಣೆ ಕಾದ ನಂತರ ಅದಕ್ಕೆ ಜೀರಿಗೆ, ಹೆಚ್ಚಿದ ಈರುಳ್ಳಿ ಹಾಗೂ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿಕೊಂಡು ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿಕೊಳ್ಳಿ.
* ನಂತರ ಅದಕ್ಕೆ ಹಸಿರು ಮೆಣಸಿನಕಾಯಿ, ಟೊಮೆಟೊ ಹಾಕಿಕೊಂಡು ಚೆನ್ನಾಗಿ ಫ್ರೈ ಮಾಡಿಕೊಳ್ಳಿ.
* ನಂತರ ಈ ಮಿಶ್ರಣಕ್ಕೆ ಅರಶಿಣ ಪುಡಿ, ಗರಂ ಮಸಾಲ, ಉಪ್ಪು ಹಾಗೂ ಸ್ವಲ್ಪ ನೀರನ್ನು ಸೇರಿಸಿಕೊಂಡು ಚನ್ನಾಗಿ ತಿರುವಿಕೊಳ್ಳಿ.
* ನಂತರ ಇದಕ್ಕೆ ತುರಿದ ಪನೀರ್ ಹಾಕಿಕೊಂಡು 5 ನಿಮಿಷಗಳ ಕಾಲ ಚನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಮಸಾಲೆ ಪನೀರ್‌ನೊಂದಿಗೆ ಸರಿಯಾಗಿ ಹೊಂದಿಕೊಳ್ಳಬೇಕು.
* ನಂತರ ಇದನ್ನು ಸರ್ವಿಂಗ್ ಪ್ಲೇಟ್‌ನಲ್ಲಿ ಹಾಕಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೇ, ಬಿಸಿಬಿಸಿ ಪನೀರ್ ಭುರ್ಜಿ ಸವಿಯಲು ಸಿದ್ಧವಾಗಿರುತ್ತದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!