ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ GST ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ( congress ) ಸದಸ್ಯರು ಧರಣಿ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನು ಮುಂದೂಡಲಾಗಿದೆ. ಪ್ರತಿಪಕ್ಷ ಸದಸ್ಯರು ಘೋಷಣೆ ಕೂಗುತ್ತಾ ಕಲಾಪಕ್ಕೆ ಅಡ್ಡಿಪಡಿಸಿದ್ದರಿಂದ ಮುಂಗಾರು ಅಧಿವೇಶನದ ಮೊದಲ ದಿನದ ಕಲಾಪ ಬಲಿಯಾಗಿದೆ.
ಸದನದ ಬಾವಿಗಿಳಿದ ಕಾಂಗ್ರೆಸ್ ಸದಸ್ಯರು, ಸರ್ಕಾರದ ವಿರುದ್ಧ ಘೋಷಣೆ ಕೂಗಲು ಆರಂಭಿಸಿದರು. ಇದನ್ನು ಗಮನಿಸಿದ ಸಭಾಪತಿ ವೆಂಕಯ್ಯ ನಾಯ್ಡು, ಕೆಲ ಸದಸ್ಯರು ಕಲಾಪಕ್ಕೆ ಅಡ್ಡಿಪಡಿಸುವುದಾಗಿಯೇ ಬಂದಿದ್ದಾರೆ. ಉಳಿದ ಸದಸ್ಯರು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲು ಹೋಗಿ, ನಾನು ದಿನದ ಮಟ್ಟಿಗೆ ಕಲಾಪವನ್ನು ಮುಂದೂಡುತ್ತೇನೆ ಎಂದು ಹೇಳಿದರು. ಇದನ್ನು ಓದಿ : – BREAKING NEWS – ಎಡಿಜಿಪಿ ಸೀಮಂತ್ ಕುಮಾರ್ ಬಗ್ಗೆ ನ್ಯಾಯಮೂರ್ತಿ ಸಂದೇಶ್ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಸುಪ್ರೀಂ ತಡೆ
ಇತ್ತೀಚಿಗೆ ನಿಧನರಾದ ಜಪಾನಿ ಮಾಜಿ ಪ್ರಧಾನಿ ಶಿಂಜೋ ಅಬೆ, ಎಎಇ ಮಾಜಿ ಅಧ್ಯಕ್ಷ ಶೇಕ್ ಖಲೀಫಾ ಬಿನ್ ಜಾಯೇದ್ ಅಲ್ ನಹ್ಯಾನ್ ಸೇರಿದಂತೆ ಮತ್ತಿತರರಿಗೆ ಶ್ರದ್ದಾಂಜಲಿ ಸಲ್ಲಿಸಿದ ಬಳಿಕ, ನಿಯಮ 267 ರ ಅಡಿಯಲ್ಲಿ ಕಾಂಗ್ರೆಸ್ ಸದಸ್ಯ ದೀಪೆಂದರ್ ಹೂಡಾ, ಅಗ್ನಿಪಥ್ ಯೋಜನೆ ಕುರಿತ ಚರ್ಚೆಗೆ ಒತ್ತಾಯಿಸಿದರು. ಮತ್ತೋರ್ವ ಕಾಂಗ್ರೆಸ್ ಸದಸ್ಯ ಶಕ್ತಿ ಸಿನ್ಹಾ ಗೋಯಲ್, ಕೂಡಲೇ ಅಗ್ನಿಪಥ್ ಯೋಜನೆ ರದ್ದುಪಡಿಸಬೇಕೆಂದು ಆಗ್ರಹಿಸಿದ್ರು. ಇದಕ್ಕೂ ಮುನ್ನ ರಾಜ್ಯಸಭೆಯ ಅನೇಕ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನು ಓದಿ : – ಗಾಂಧಿ ಕುಟುಂಬದ ಪರಮಾಪ್ತೆ ಮಾರ್ಗರೇಟ್ ಆಳ್ವ ಬಗ್ಗೆ ನಿಮಗೆಷ್ಟು ಗೊತ್ತು…?