ಪ್ರಧಾನಿ ಮೋದಿ ವಿರುದ್ಧ BBC ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ ರಷ್ಯಾ (RUSSIA) ಆಕ್ರೋಶ ವ್ಯಕ್ತಪಡಿಸಿದೆ. ರಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಮಾರಿಯಾ ಜಖರೋವಾ ಪ್ರತಿಕ್ರಿಯಿಸಿ, ಬಿಬಿಸಿ ರಷ್ಯಾದ ವಿರುದ್ಧ ಮಾತ್ರವಲ್ಲದೇ ಸ್ವತಂತ್ರ ನೀತಿಯನ್ನು ಅನುಸರಿಸುತ್ತಿರುವ ಇತರ ದೇಶಗಳ ವಿರುದ್ಧ ಮಾಹಿತಿ ಯುದ್ಧವನ್ನು ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಬಿಸಿ ವಿವಿಧ ರಂಗಗಳಲ್ಲಿ ಮಾಹಿತಿ ಯುದ್ಧವನ್ನು ನಡೆಸುತ್ತಿದೆ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ. BBC ಈಗ ಸ್ವತಂತ್ರವಾಗಿ ಉಳಿದಿಲ್ಲ. ಪತ್ರಿಕೋದ್ಯಮ ವೃತ್ತಿಯನ್ನು ನಿರ್ಲಕ್ಷಿಸಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಪ್ರಧಾನಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ನಡೆದ ಗಲಭೆ ವಿಷಯಗಳ ಬಗ್ಗೆ ತನಿಖೆ ನಡೆಸಿ ಎರಡು ಭಾಗಗಳಲ್ಲಿ BBC ಸಾಕ್ಷ್ಯಚಿತ್ರವನ್ನು ತಯಾರಿಸಿದೆ. ಭಾರತದ ವಿದೇಶಾಂಗ ಇಲಾಖೆ ಇದು “ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಟೀಕಿಸಿದೆ.
ಇದನ್ನು ಓದಿ :- ಸುಮಲತಾ ಅಂಬರೀಶ್ ರಾಜ್ಯ ರಾಜಕಾರಣಕ್ಕೆ ಬರುವಂತೆ ಮಂಡ್ಯದಲ್ಲಿ ಬೆಂಬಲಿಗರ ಒತ್ತಾಯ