ಬಿಜೆಪಿ ನೇತೃತ್ವದ ಎನ್ಡಿಎ( NDA ) ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಿದೆ. ಬಿಜೆಪಿ ಹಿರಿಯ ಮುಖಂಡರಾದ ದ್ರೌಪದಿ ಮುರ್ಮು (DRAUPADI MURMA ) 2015-21ರ ಅವಧಿಯಲ್ಲಿ ಜಾರ್ಖಂಡ್ ನ ರಾಜ್ಯಪಾಲರಾಗಿದ್ದರು. 16ನೇ ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಇವರು ಬುಡಕಟ್ಟು ಜನಾಂಗ ಮೂಲದ ಮಹಿಳೆಯಾಗಿದ್ದು, ಪಕ್ಷದ ನೇತೃತ್ವದಲ್ಲಿ ನಾನಾ ಸ್ಥಾನಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದಾರೆ. ದ್ರೌಪದಿ ಮುರ್ಮು ಅವರು ಸಮಾಜ ಸೇವೆಗೆ ಮತ್ತು ಬಡವರು, ದೀನದಲಿತರು ಹಾಗೂ ಸಮಾಜದ ಅಂಚಿನಲ್ಲಿರುವವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರು ಶ್ರೀಮಂತ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ನಮ್ಮ ರಾಷ್ಟ್ರದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆʼ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : – 40 ಶಿವಸೇನೆ ಶಾಸಕರು ನನ್ನ ಜೊತೆಗೇ ಇದ್ದು ಯಾರೂ ಪಕ್ಷ ತೊರೆಯುತ್ತಿಲ್ಲ- ಏಕನಾಥ್ ಶಿಂಧೆ
ರಾಷ್ಟ್ರೀಯ ಪುಜಾಸತ್ತಾತ್ಮಕ ಒಕ್ಕೂಟ ಮೈತ್ರಿಕೂಟದ ರಾಷ್ಟ್ರ ಪ್ರತಿ ಅಭ್ಯರ್ಥಿ ದೌಪದಿ ಮುರ್ಮು ಇಂದು ಮುಂಜಾನೆ ಒಡಿಶಾದ ರೈರಂಗ್ಪುರ್ ನಗರದ ಜಗನ್ನಾಥ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಮುರ್ಮು ಭೇಟಿ ನೀಡುವ ಹಿನ್ನೆಲೆಯಲ್ಲಿ ದೇಗುಲಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ದೇಗುಲಕ್ಕೆ ಬಂದಿದ್ದ ಇತರ ಭಕ್ತರು ಮುರ್ಮು ಅವರನ್ನು ಅಭಿನಂದಿಸಿದರು. ಮುರ್ಮು ಅವರು ಸಹ ಭಕ್ತರಿಗೆ ನಗುನಗುತ್ತಲೇ ಪ್ರತಿವಂದನೆ ಸಲ್ಲಿಸಿದರು. ರೈರಂಗ್ಪುರದ ಶಿವ ದೇಗುಲಕ್ಕೂ ಭೇಟಿ ನೀಡಿದ ಅವರು, ಪ್ರಾರ್ಥನೆ ಸಲ್ಲಿಸುವ ಮೊದಲು ದೇಗುಲ ಪ್ರಾಂಗಣದಲ್ಲಿ ಕಸ ಗುಡಿಸಿದರು.
ಇದನ್ನೂ ಓದಿ : – ಮಹಾ ವಿಕಾಸ್ ಅಘಾಡಿ ಬಿಕ್ಕಟ್ಟು- ಶಿವಸೇನೆ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಏಕನಾಥ್ ಶಿಂಧೆ ವಜಾ