ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 74ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಕಳೆದ 24 ಘಂಟೆಯಲ್ಲಿ ಇಬ್ಬರು ಬಲಿ, ಮೈಸೂರು, ದಕ್ಷಿಣ ಕನ್ನಡ ಒಬ್ಬೊಬ್ಬರು ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ 57 ಪ್ರಕರಣ ವರದಿಯಾಗಿದೆ. 6403 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಬೆಂಗಳೂರಿನಲ್ಲಿ 2104 ಕೋವಿಡ್ ಟೆಸ್ಟ್ ಮಾಡಲಾಗಿತ್ತು. ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ 1.15%ಗೆ ಇಳಿಕೆ ಆಗಿದೆ. ಕಳೆದ 24 ಗಂಟೆಯಲ್ಲಿ 44 ಜನ ಕೊರೊನಾ ಸೋಂಕಿನಿಂದ ಗಣಮುಖವಾಗಿದ್ದು, ರಾಜ್ಯದಲ್ಲಿರುವ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 464 ಏರಿಕೆ ಆಗಿದೆ. ಹೋಮ್ ಐಸೊಲೇಷನ್ ನಲ್ಲಿರುವ 423 ಸೋಂಕಿತರು, 41 ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಜಯನಗರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ 1, ರಾಜ್ಯದಲ್ಲಿ ಕೊವಿಡ್ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 464, ಬೆಂಗಳೂರಿನಲ್ಲಿ ಕೊವಿಡ್ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 376, ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಶೇ.1.15ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಇಂದು ಸಚಿವ ದಿನೇಶ್ ಗುಂಡೂರಾವ್, ತಜ್ಞರ ಜತೆ ಸಭೆ ನಡೆಸಿದ್ದಾರೆ. ಸಭೆ ನಂತರ ಮಾತನಾಡಿದ ಅವರು ಸೋಂಕು ತಡೆಗೆ ಕೈಗೊಂಡ ಪ್ರಮುಖ ನಿರ್ಧಾರಗಳನ್ನ ತಿಳಿಸಿದ್ದಾರೆ.