ಅರಿಶಿನವು ಆಯುರ್ವೇದ ಔಷಧಿಯ ರೂಪ ಎಂದು ಹೇಳುತ್ತಾರೆ. ಎದೆಯಲ್ಲಿ ಉರಿ, ಅತಿಯಾದ ದಣಿವು, ನಿದ್ದೆ ಇಲ್ಲದಿರುವಿಕೆ, ಶೀತ, ಕೆಮ್ಮು, ಜ್ವರ, ನೆಗಡಿ, ಮೈಕೈ ನೋವು, ಮಹಿಳೆಯರ ಮಾಸಿಕ ದಿನಗಳಲ್ಲಿ ಎದುರಾಗುವ ಹೊಟ್ಟೆಯ ಸೆಡೆತ, ವಾಕರಿಕೆ, ವಾಂತಿ, ಅತಿಸಾರ ಮೊದಲಾದ ಸಾಮಾನ್ಯ ತೊಂದರೆಗಳಿಗೆ ಅರಿಶಿನ ಸೂಕ್ತ ಪರಿಹಾರವಾಗಿದೆ.
ಅರಿಶಿನವನ್ನು ಸೇವಿಸುವ ಮೂಲಕ ಪಡೆಯಬಹುದಾದ ಚಿಕಿತ್ಸೆಗಳಾದರೆ ಇದನ್ನು ಚರ್ಮದ ಹೊರಗಿನಿಂದ ಹಚ್ಚಿಕೊಳ್ಳುವ ಮೂಲಕ ಪಡೆಯಬಹುದಾದ ಸೌಂದರ್ಯವರ್ಧಕ ಮತ್ತು ತ್ವಚೆಯನ್ನು ಕಾಪಾಡುವ ಗುಣಗಳು ಇವೆ. ಚಿಕ್ಕ ಪುಟ್ಟ ಗಾಯಗಳು, ಉರಿ, ಬಿಸಿಲಿನ ಹೊಡೆತ, ಸುಟ್ಟ ಗಾಯ, ಉಳುಕು, ಮೊಣಕಾಲ ನೋವು, ತುರಿಕೆ ಮೊದಲಾದ ಎಷ್ಟೋ ತೊಂದರೆಗಳಿಗೆ ಅರಿಶಿನವನ್ನು ಲೇಪದ ರೂಪದಲ್ಲಿ ಹಚ್ಚಿಕೊಳ್ಳಬಹುದು.
ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆಯನ್ನು ಶುದ್ಧಗೊಳಿಸುತ್ತದೆ.
ಕ್ಯಾನ್ಸರ್ ತಡೆಗಟ್ಟುತ್ತದೆ : ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.
ಜೀರ್ಣಕ್ರಿಯೆ ಹೆಚ್ಚಿಸುತ್ತದೆ : ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ , ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ ಅರಿಶಿನವನ್ನು ಒಂದು ಕಪ್ ಹಾಲಿಗೆ ಸೇರಿಸಿ ಕುಡಿಯಿರಿ.
ಕೆಮ್ಮು ಮತ್ತು ಶೀತಕ್ಕೆ ಪರಿಹಾರ : ಅರಿಶಿನ ಹಾಲು ಆಂಟಿವೈರಲ್ ಮತ್ತು ಆಂಟಿಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವುದರಿಂದ ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ಗಂಟಲು ನೋಯುತ್ತಿದ್ದರೆ ಅರಿಶಿನ ಹಾಲನ್ನು ಕುಡಿಯಿರಿ.
ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ : ಅರಿಶಿನದ ಹಾಲು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಅಸ್ತಮಾ, ಬ್ರಾಂಕೈಟಿಸ್ಗೆ ಪರಿಣಾಮಕಾರಿ ಪರಿಹಾರವಾಗಿದೆ. ಸೈನಸ್ ಮತ್ತು ಶ್ವಾಸಕೋಶದ ಸಮಸ್ಯೆಯಿದ್ದರೂ ಪರಿಹಾರ ನೀಡುತ್ತದೆ.
ತೂಕ ಕಡಿಮೆಯಾಗುತ್ತದೆ : ಹೌದು, ಅರಿಶಿನ ಹಾಲು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ! ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.
ಸರಿಯಾಗಿ ನಿದ್ರೆ ಬರಲು : ನಿದ್ರೆ ಸರಿಯಾಗಿ ಬರದಿದ್ದರೆ ಅರಿಶಿನ ಹಾಲು ಕುಡಿಯಿರಿ. ಮಲಗುವ ಮೊದಲು ಅರಿಶಿನ ಹಾಲು ಕುಡಿದರೆ ವಿಶ್ರಾಂತಿ ಸಿಗುತ್ತದೆ. ಮನಸ್ಸು ಶಾಂತಗೊಂಡು ನಿದ್ರೆ ಬರುತ್ತದೆ.
ಚರ್ಮಕ್ಕೆ ಹೊಳಪು ನೀಡುತ್ತದೆ : ಅರಿಶಿನದ ಹಾಲು ಮೊಡವೆ, ಎಸ್ಜಿಮಾ, ಇತರ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಚರ್ಮದಲ್ಲಿ ಮೂಡಿರುವ ಸುಕ್ಕುಗಳನ್ನು ತೆಗೆದು, ನೈಸರ್ಗಿಕವಾಗಿ ಹೊಳೆಯಲು ಸಹಾಯ ಮಾಡುತ್ತದೆ.
ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ : ಅರಿಶಿನ ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ಹೇಳಿವೆ. ಅರಿಶಿನದಲ್ಲಿನ ಕರ್ಕ್ಯುಮಿನ್ ಸೈಟೊಕಿನ್ ಗಳ ಬಿಡುಗಡೆ ತಡೆಯುತ್ತದೆ. ಈ ಸೈಟೊಕಿನ್ ಗಳು ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗೆ ಸಂಬಂಧಿಸಿವೆ.
ಮಧುಮೇಹ ಚಿಕಿತ್ಸೆಗೆ : ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶ ರಕ್ತದಲ್ಲಿರುವ ಗ್ಲೂಕೋಸ್ ಮಟ್ಟ ಕಡಿಮೆ ಮಾಡುತ್ತದೆ. ಇದು ಮಧುಮೇಹ ಚಿಕಿತ್ಸೆಗೆ ಸಹಾಯ ಮಾಡುತ್ತದೆ. ಡಯಾಬಿಟಿಕ್ ನೆಫ್ರೋಪತಿ, ಡಯಾಬಿಟಿಕ್ ರೆಟಿನೋಪತಿ ಚಿಕಿತ್ಸೆಯಲ್ಲಿ ಕರ್ಕ್ಯುಮಿನ್ ಬಳಸಲಾಗುತ್ತದೆ.