ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಸಿಲುಕಿ, ಅಪಘಾತದಿಂದ ಬೈಕ್ ಸವಾರ ಅಶ್ವಿನ್ ಸಾವು ಪ್ರಕರಣ ಪ್ರತಿಭಟನೆ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿ ಬೆಂಗಳೂರಲ್ಲಿ BBMP ಆಯುಕ್ತ ಗೌರವ್ ಗುಪ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಜಲಮಂಡಳಿ ತಪ್ಪಿನಿಂದ ಇಂತಹ ಅನಾಹುತ ಆಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಲಮಂಡಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗುತ್ತೆ. BBMPಗೆ ಮಾಹಿತಿ ನೀಡದೆ ರಸ್ತೆ ಅಗೆದಿದ್ದಕ್ಕೆ ಅನಾಹುತ ಸಂಭವಿಸಿದೆ ಎಂದು ಹೇಳಿದ್ದಾರೆ. ಈಗಾಗಲೇ ಜಲಮಂಡಳಿ, ಬೆಸ್ಕಾಂ ಮೇಲೆ ಕೇಸ್ ದಾಖಲು ಮಾಡಲಾಗಿದೆ. ಕಾನೂನಿನಲ್ಲಿ ಅವಶ್ಯಕತೆ ಇದ್ದರೆ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಮೃತ ಅಶ್ವಿನ್ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದ ಬಗ್ಗೆಯೂ ಗೌರವ್ ಗುಪ್ತಾ ತಿಳಿಸಿದ್ದಾರೆ. ಘಟನೆಯಿಂದ ಎಚ್ಚೆತ್ತ ಅಧಿಕಾರಿಗಳು ಗುಂಡಿ ಮುಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.
0 290 Less than a minute