ಸಂಘರ್ಷ ಪೀಡಿತ ಉಕ್ರೇನ್ ನಲ್ಲಿ ಇನ್ನೂ ಬಾಂಬ್ ದಾಳಿ ನಿಂತಿಲ್ಲ.. ಬಾಂಬ್ ದಾಳಿ ನಿಂತ ಬಳಿಕ ನವೀನ್ ಶೇಖರಪ್ಪ ಮೃತದೇಹವನ್ನು ತರುವ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಉಕ್ರೇನ್ ನಲ್ಲಿ ಬಾಂಬಿಂಗ್ ಇನ್ನೂ ನಡೀತಿದೆ; ದಾಳಿ ನಿಂತ ನಂತರ ದೇಹ ತರುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿದ್ದ ಎಲ್ಲ ಭಾರತೀಯರ ಏರ್‌ಲಿಫ್ಟ್ ಮಾಡಲಾಗಿದೆ. ಬಹುತೇಕ ಎಲ್ಲರನ್ನೂ ಏರ್‌ಲಿಫ್ಟ್ ಮಾಡಿದ್ದಾರೆ. ಉಕ್ರೇನ್ನಲ್ಲಿ ಇರುವ ಭಾರತೀಯರ ಸ್ಥಳಾಂತರ ಅಂತಿಮ ಹಂತಕ್ಕೆ ಬಂದಿದೆ. ನವೀನ್ ದೇಹ ತರೋ ಬಗ್ಗೆ ಮಾತುಕತೆ ನಡೀತಿದೆ. ಉಕ್ರೇನ್ ನಲ್ಲಿ ಬಾಂಬಿಂಗ್ ಇನ್ನೂ ನಡೀತಿದೆ. ದಾಳಿ ನಿಂತ ನಂತರ ದೇಹ ತರುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಉಕ್ರೇನ್ನಲ್ಲಿ ಉಳಿದವರಿಗೂ ಬೇರೆ ಬೇರೆ ರೀತಿಯಲ್ಲಿ ಸಹಾಯ ಮಾಡಲು ಭಾರತ ಮುಂದಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
0 340 Less than a minute