ಮೈಸೂರಿನಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗಲತಗುಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸೋಮಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ಸೀಹಳ್ಳಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದುರ್ಘಟನೆ ಸಂಭವಿಸಿದೆ. ಧಗ ಧಗನೆ ಉರಿದು ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ವೇಳೆ ಮನೆಯಲ್ಲಿದ್ದ ಸೋಮಶೇಖರಪ್ಪ
ಬೆಂಕಿಯ ಕೆನ್ನಾಲಿಗೆಯಿಂದ ಸುಟ್ಟು ಕರಕಲಾಗಿದ್ದಾರೆ. ಬೆಂಕಿಯ ತೀವ್ರತೆಗೆ ಪಕ್ಕದ ಎರಡು ಮನೆಗಳಿಗೂ ಹಾನಿಯುಂಟಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಗದು ಬೆಂಕಿಗಾಹುತಿಯಾಗಿದೆ. ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
0 327 Less than a minute