ಮಾಜಿ ಸಿಎಂ ಬಿಎಸ್ ವೈ ಪುತ್ರ ಬಿ. ವೈ ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಸಿಗೋ ಸಾಧ್ಯತೆ ಇದೆ. ವಿಜಯೇಂದ್ರರಿಗೆ ಸಚಿವ ಸ್ಥಾನ ಬಿಟ್ಟು ಪಕ್ಷಕ್ಕೆ ಬಳಸಿಕೊಳ್ಳಲು ಹೈಕಮಾಂಡ್ ಪ್ಲಾನ್ ಮಾಡಿದೆ. ಮುಂಬರುವ ಚುನಾವಣೆಗೆ ಜವಾಬ್ದಾರಿ ನೀಡಲು ಹೈಕಮಾಂಡ್ ತಯಾರಾಗಿದೆ ಎನ್ನಲಾಗಿದೆ. ಸದ್ಯ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿಟಿ ರವಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಿ ಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿದೆ.
ಸಿಟಿ ರವಿ ಸ್ಥಾನಕ್ಕೆ ತೆರವಾದ ಪ್ರಧಾನ ಕಾರ್ಯದರ್ಶಿ ಹುದ್ದೆ ವಿಜಯೇಂದ್ರಗೆ ಒಲಿಯೋ ಸಾಧ್ಯತೆ ದಟ್ಟವಾಗಿದೆ. ಒಕ್ಕಲಿಗ ಅಧ್ಯಕ್ಷ, ಲಿಂಗಾಯತ ಸಿಎಂ ಫಾರ್ಮುಲಾ ಜಾರಿ ಮಾಡಲು ಹೈಕಮಾಂಡ್ ಪ್ಲಾನ್ ಮಾಡಿದ್ದು ವಿಜಯೇಂದ್ರಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ್ರೆ ಬಿಎಸ್‌ವೈಗೂ ಸಮಾಧಾನವಾಗಲಿದೆ. ಬೈ ಎಲೆಕ್ಷನ್‌ಗಳಲ್ಲಿ ಶಕ್ತಿ ಪ್ರದರ್ಶನ ಮಾಡಿರುವ ವಿಜಯೇಂದ್ರ ಈಗಾಗಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಭೇಟಿ ಮಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ.
0 320 Less than a minute