ರಾಜ್ಯದಲ್ಲಿ ಪುಠ್ಯ ಪುಸ್ತಕ ವಿವಾದ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಮಕ್ಕಳ ಭವಿಷ್ಯವನ್ನು ಸರ್ಕಾರ ಕಾಪಾಡಬೇಕು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ “ಶಿಕ್ಷಣ ತಜ್ಞರು, ವಿದ್ವಾಂಸರು ಇರಬೇಕಾದ ಪಠ್ಯ ಪುಸ್ತಕ ಸಮಿತಿಗೆ ₹2 ಟ್ರಾಲ್ಗಳು, ಬಿಜೆಪಿಯ ಬಾಡಿಗೆ ಭಾಷಣಕಾರರನ್ನು ಕೂರಿಸಿ ಮಕ್ಕಳಿಗೆ ಸುಳ್ಳಿನ ಶೂರರ ಪಾಠ ಹೇಳಿಸುವುದು ವಿಪರ್ಯಾಸ ಎಂದು ಹೇಳಿದ್ದಾರೆ.
ನಾಡು, ನುಡಿಗೆ, ಕುವೆಂಪುರಂತಹವರಿಗೆ ಅವಮಾನಿಸಿದ ಈತನ ಟ್ರಾಲ್ ಪಾಂಡಿತ್ಯವೇ ಅರ್ಹತೆಯೇ? ಸರ್ಕಾರ ಕೂಡಲೇ ಈತನನ್ನು ಕಿತ್ತೆಸೆದು ಮಕ್ಕಳ ಭವಿಷ್ಯ ಕಾಪಾಡಬೇಕು ಎಂದಿದ್ದಾರೆ. ಪಠ್ಯ ಪುಸ್ತಕದಲ್ಲಿ ಭಗತ್ ಸಿಂಗ್, ನಾರಾಯಣ ಗುರು ಸೇರಿದಂತೆ ಕೆಲವು ಲೇಖಕರ ಪಠ್ಯವನ್ನು ಕೈಬಿಟ್ಟು ಆರ್ ಎಸ್ ಎಸ್ ಸ್ಥಾಪಕ ಕೆ.ಬಿ ಹೆಡ್ಗೆವಾರ್ ಭಾಷಣವನ್ನು ಸೇರಿಸಿರುವುದು ಹಾಗೂ ಚಕ್ರವರ್ತಿ ಸೂಲಿಬೆಲೆ ಅವರು ಬರೆದಿರುವ ಪದ್ಯವನ್ನು ಸೇರ್ಪಡೆಗೊಳಿಸಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬ್ಯಾಹ್ಮಣ್ಯ ಪಠ್ಯವನ್ನು ತಿರಸ್ಕಾರ ಮಾಡಿ ಎಂದು ಅಭಿಯಾನ ನಡೆಸಲಾಗಿದೆ. ಪಠ್ಯ ವಿವಾದ ಇದೀಗ ರಾಜಕೀಯವಾಗಿಯೂ ಚರ್ಚೆಗೆ ಗ್ರಾಸವಾಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.
ರೋಹಿತ್ ಚಕ್ರತೀರ್ಥರನ್ನು ಸಮಿತಿಯಿಂದ ಕಿತ್ತು ಹಾಕಿ –ಸಿದ್ದರಾಮಯ್ಯ
ಮೊದಲು ರೋಹಿತ್ ಚಕ್ರತೀರ್ಥರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕಿತ್ತು ಹಾಕಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತಾಗಿ ಫೇಸ್ಬುಕ್ ನಲ್ಲಿ ಸ್ಟೇಟಸ್ ಹಾಕಿರುವ ಅವರು, “ನಾಡಗೀತೆಯನ್ನು ಅವಹೇಳನ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು” ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ :- ಮೇಕೆದಾಟು ಪಾದಯಾತ್ರೆಯಲ್ಲಿ ನಿಯಮ ಉಲ್ಲಂಘನೆ ಆರೋಪ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯಗೆ ಸಮನ್ಸ್