ಯುದ್ಧ ಪೀಡಿತ ಉಕ್ರೇನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ನಂತರ ಅತಂತ್ರ ಭವಿಷ್ಯದ ಭಯದಲ್ಲಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹಲವಾರು ಉಕ್ರೇನಿಯನ್ ವೈದ್ಯಕೀಯ ವಿಶ್ವವಿದ್ಯಾಲಯಗಳು ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಿದ್ದು ಕೊಂಚ ನಿರಾಳ ತಂದಿದೆ. ಪ್ರಾಯೋಗಿಕ ತರಗತಿಗಳಿಗೆ ಹಾಜರಾಗಲು ಸಾಧ್ಯವಿಲ್ಲದಿರುವುದಕ್ಕೆ ಕೆಲವು ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.
ರಷ್ಯಾ ಪಡೆಗಳ ನಿರಂತರ ಶೆಲ್ ದಾಳಿಯ ನಡುವೆ ಉಕ್ರೇನ್ನಲ್ಲಿ ದೈಹಿಕ ತರಗತಿಗಳನ್ನು ನಡೆಸುವುದು ಅಸಾಧ್ಯವಾದ ಕಾರಣ, ಪಶ್ಚಿಮ ಉಕ್ರೇನ್ನಲ್ಲಿರುವ ಹಲವಾರು ವೈದ್ಯಕೀಯ ವಿಶ್ವವಿದ್ಯಾಲಯಗಳು ಸೋಮವಾರದಿಂದ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಿವೆ. ಮುಂದುವರಿದ ಶೆಲ್ ದಾಳಿಯ ನಡುವೆ ತಮ್ಮ ಶಿಕ್ಷಕರು ತಮ್ಮ ಮನೆ ಅಥವಾ ಸುರಕ್ಷಿತ ಸ್ಥಳಗಳಿಂದ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಡ್ಯಾನಿಲೊ ಹ್ಯಾಲಿಟ್ಸ್ಕಿ, ಎಲ್ವಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯ, ಇವಾನೊ-ಫ್ರಾಂಕಿವ್ಸ್ಕ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯ, ವಿನ್ನಿಟ್ಸಿಯಾ ನ್ಯಾಷನಲ್ ಪಿರೊಗೊವ್ ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ಬೊಗೊಮೊಲೆಟ್ಸ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯ ಸೋಮವಾರದಿಂದ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಿವೆ.