ಕೋವಿಡ್ ( covied )ಪ್ರಕರಣಗಳ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ನಿಯಮ ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸುವುದಾಗಿ ತಿಳಿಸಿದೆ. ಸರ್ಕಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಈ ದಂಡವು ನಾಲ್ಕು ಚಕ್ರದ ಖಾಸಗಿ ವಾಹನಗಳಲ್ಲಿ ಒಟ್ಟಿಗೆ ಪ್ರಯಾಣಿಸುವ ವ್ಯಕ್ತಿಗಳಿಗೆ ಅನ್ವಯಿಸುವುದಿಲ್ಲ.
ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ ( jai prakash narayan )ಆಸ್ಪತ್ರೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿದ್ದ ಮಾದರಿಗಳಲ್ಲಿ ಕೊರೊನಾ ವೈರಸ್ನ ರೂಪಾಂತರವಾದ ಓಮೈಕ್ರಾನ್ನ ಹೊಸ ಉಪತಳಿ ಪತ್ತೆಯಾಗಿದೆ. ದೆಹಲಿಯಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಹೀಗಾಗಿ ದೆಹಲಿಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ 500 ರೂಪಾಯಿ ದಂಡ ವಿಧಿಸುವುದಾಗಿ ದೆಹಲಿ ಸರ್ಕಾರ ಹೇಳಿದೆ.
ಇದನ್ನೂ ಓದಿ : – ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆ ಬಗ್ಗೆ ಕಾಂಗ್ರೆಸ್ ವ್ಯಂಗ್ಯ ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆ ಬಗ್ಗೆ ಕಾಂಗ್ರೆಸ್ ವ್ಯಂಗ್ಯ