ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.61 ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 879 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,36,89,453ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,71,058ಕ್ಕೆ ಜಿಗಿತ ಕಂಡಿದೆ.
ಒಟ್ಟಾರೆ ಗುಣಮುಖಿತರ ಸಂಖ್ಯೆ 1,22,53,697ಕ್ಕೆ ಜಿಗಿತ ಕಂಡಿದ್ದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 12,64,698ಕ್ಕೆ ಏರಿಕೆ ಕಂಡಿದೆ.