ಗದಗ : ಅಕ್ರಮವಾಗಿ ಅನ್ನ ಭಾಗ್ಯದ ಅಕ್ಕಿ ದಾಸ್ತಾನು ಮಾಡಿದ್ದ ಕಟ್ಟಡದ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಸುಮಾರು 13 ಲಕ್ಷ ರೂಪಾಯಿ ಮೌಲ್ಯದ ಅಂದಾಜು 1 ಸಾವಿರ ಚೀಲ ಅಕ್ಕಿ ವಶ ಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಗಜೇಂದ್ರಗಡ ಪಟ್ಟಣದ ಹೊರವಲಯದಲ್ಲಿ ಕಟ್ಟಡವೊಂದರಲ್ಲಿ ಖದೀಮರು ಅಕ್ಕಿಯನ್ನ ದಾಸ್ತಾನು ಮಾಡಿದ್ದರು ಎನ್ನಲಾಗಿದೆ.
ಖದೀಮರಿಗೆ ಬಲೆ ಬಿಸಿದ ಪೋಲಿಸರು ತಹಶಿಲ್ದಾರ ಅಶೋಕ ಕಲಘಟಗಿ, ಆಹಾರ ನಿರೀಕ್ಷಕ ಮಂಜುನಾಥ ತಳ್ಳಿಹಾಳ ಹಾಗೂ ಪಿಎಸ್ಐ ಗುರುಶಾಂತ ದಾಶ್ಯಾಳ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.