ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಡಿಸೆಲ್ ದರ ಗಗನಮುಖಿಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ ಬಾರಿಸಿದೆ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ ಬರೋಬ್ಬರಿ 98 ರೂಪಾಯಿ 19 ಪೈಸೆಯಾಗಿದೆ. ಲೀಟರ್ ಡೀಸೆಲ್ ದರ 90 ರೂಪಾಯಿ 84 ಪೈಯಾಗಿದೆ. ಕೊರೊನಾ ಲಾಕ್ ಡೌನ್ ನಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಈ ನಡುವೆ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿರುವುದು ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.
ಮುಂಬೈ ಮಹಾನಗರದಲ್ಲಿ ಲೀಟರ್ ಪೆಟ್ರೋಲ್ 101ರೂ ಆಗಿದ್ದರೆ, ತೆಲಂಗಾಣ, ಹೈದರಾಬಾದ್ ನಲ್ಲಿ ಕೂಡ ಲೀಟರ್ ಪೆಟ್ರೋಲ್ ದರ 100 ರೂ ಗಡಿ ದಾಟಿದೆ. ದೆಹಲಿಯಲ್ಲಿ 95 ರೂ ಆಗಿದೆ.