ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1065 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 28 ಮಂದಿ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 270 ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1468 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,048ಕ್ಕೆ ಇಳಿಕೆಯಾಗಿದೆ.