ರಾಜ್ಯದಲ್ಲಿ ಕಳೆದ ಒಂದು ದಿನದಲ್ಲಿ 1074 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 1136 ಮಂದಿ ಗುಣಮುಖಿತರಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 4 ಮಂದಿ ಸೋಂಕಿಗೆ ಬಲಿಯಾಗಿದ್ದರೆ, ಬೆಂಗಳೂರಿನಲ್ಲಿ ಮೂವರು ಅಸುನೀಗಿದ್ದಾರೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1136 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಬೆಂಗಳೂರಿನಲ್ಲಿ 343 ಸೋಂಕು ಪ್ರಕರಣಗಳು ದೃಢಪಟ್ಟಿದ್ದರೆ. 251 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 16,992ಕ್ಕೆ ಇಳಿಕೆಯಾಗಿದೆ.