ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 10,959 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 192 ಸೋಂಕಿತರು ಸಾವನ್ನಪ್ಪಿದ್ದಾರೆ. ಟ್ಟು ಸೋಂಕಿತರ ಸಂಖ್ಯೆ 2,72,8248ಕ್ಕೆ ಏರಿಕೆಯಾಗಿದೆ
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 10,959 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 2,72,8248ಕ್ಕೆ ಏರಿಕೆಯಾಗಿದೆ. ಇಂದು 192 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 32,291 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 20,246 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 24,80,411 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 2,15,525 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 2,395 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 50 ಸೋಂಕಿತರು ಸಾವನ್ನಪ್ಪಿದ್ದಾರೆ. 98,125ಸಕ್ರಿಯ ಪ್ರಕರಣಗಳಿವೆ.