ಹಿಮಾಚಲ ಪ್ರದೇಶದ ಕಿನ್ನೌರ್ ಪ್ರದೇಶದಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದ್ದು, 30ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಭೂ ಕುಸಿತದಿಂದ ಕಿನ್ನೌರ್ ನಿಂದ ಹರಿದ್ವಾರಕ್ಕೆ ತೆರಳುತ್ತಿದ್ದ ಬಸ್ ಹಾಗೂ ಇನ್ನಿತರ ವಾಹನಗಳ ಮೇಲೆ ಮಣ್ಣು ಹಾಗೂ ಬಂಡೆಕಲ್ಲೂಗಳು ಬಿದ್ದಿದ್ದು, ಮಣ್ಣಿನಡಿ ಸಿಲುಕಿದ್ದ 10ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.
ಬಸ್ ನಲ್ಲಿ 30 ಮಂದಿ ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದ್ದು, ಬಸ್ ಸಂಪೂರ್ಣ ಹಾನಿಯಾಗಿದ್ದು, ಸಂಪೂರ್ಣ ಮಣ್ಣಿನಿಂದ ಮುಚ್ಚಿಕೊಂಡಿದೆ. ಘಟನಾ ಸ್ಥಳಕ್ಕೆ ಸುಮಾರು 200 ಭದ್ರತಾ ಸಿಬ್ಬಂದಿ ರಕ್ಷಣೆಗೆ ಧಾವಿಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.