ನಾಲ್ಕು ಅಂತಸ್ತಿನ ಬಹುಮಹಡಿ ಕಟ್ಟಡ ಕುಸಿದ ಪರಿಣಾಮ 8 ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟ ಭೀಕರ ಘಟನೆ ಮುಂಬೈನಲ್ಲಿ ಸಂಭವಿಸಿದೆ.
ಮುಂಬೈನ ಮಲಡ್ ವೆಸ್ಟ್ ಬಳಿಯ 4 ಅಂತಸ್ತಿನ ಕಟ್ಟಡ ಮತ್ತೊಂದು ಕಟ್ಟಡದ ಮೇಲೆ ಕುಸಿದ ಪರಿಣಾಮ ಈ ದುರಂತ ಸಂಭವಿಸಿದ್ದು, ಗಾಯಗೊಂಡ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.
ಬುಧವಾರ ತಡರಾತ್ರಿ 11.45ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಘಟನಾ ರ್ಸಥಳಕ್ಕೆ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಘೂ ಪೊಲೀಸರು ಆವಶೇಷಗಳಡಿ ಸಿಲುಕಿದ್ದ 16 ಮಂದಿಯನ್ನು ರಕ್ಷಿಸಿದ್ದಾರೆ.