ಬೆಂಗಳೂರು : ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 11,042 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 194 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,39,290ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 11,042 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 179 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 32,485 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 15,721 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 24,96,132 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 2,10,652ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 2,191 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 47 ಸೋಂಕಿತರು ಸಾವನ್ನಪ್ಪಿದ್ದಾರೆ. 95,423 ಸಕ್ರಿಯ ಪ್ರಕರಣಗಳಿವೆ