ಯುಗಾದಿ ಹಬ್ಬಕ್ಕೆ ಬಟ್ಟೆ ಕೊಡಿಸಲಿಲ್ಲ ಎಂಬ ಕಾರಣಕ್ಕೆ 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಕೊಳ್ಳೇಗಾಲ ಪಟ್ಟಣದ ಬಸ್ತೀಪುರ ಬಡಾವಣೆಯ ರಸ್ತೆ ನಾಯ್ಡು ತೋಟ ಸಮೀಪದ ನಿವಾಸಿ ಬಸವರಾಜು ಅವರ ಪುತ್ರಿ 7 ತರಗತಿ ವಿದ್ಯಾರ್ಥಿನಿ ಹರ್ಷಿತಾ (12) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಮಗಳು ಹಬ್ಬಕ್ಕೆ ಹೊಸ ಬಟ್ಟೆ ಎಂದು ಕೇಳಿದಾಗ ಪೋಷಕರು ಸಂಬಳವಾದ ಬಳಿಕ ಎಲ್ಲರೂ ಸೇರಿ ಬಟ್ಟೆ ತೆಗೆದುಕೊಳ್ಳೋಣ ಎಂದು ಹೇಳಿದ್ದಾರೆ. ಅಷ್ಟಕ್ಕೇ ಬೇಸರಗೊಂಡ ಹುಡುಗಿ ಯಾರು ಇಲ್ಲದ ಸಮಯದಲ್ಲಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಥಳಕ್ಕೆ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಕೊಳ್ಳೇಗಾಲದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.