ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 12,209 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.7.71ಕ್ಕೆ ಕುಸಿದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಭಾನುವಾರ ಟ್ವಿಟ್ ಮಾಡಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.7.71ಕ್ಕೆ ಕುಸಿದಿರುವ ವಿಚಾರ ತಿಳಿಸಿದರು. ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಬಂದರೆ ಲಾಕ್ ಡೌನ್ ಸಡಿಲಗೊಳಿಸಲಾಗುವುದು ಎಂದು ಸಿಎಂ ಈ ಹಿಂದೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಒಂದು ದಿನದಲ್ಲಿ 25,269 ಮಂದಿ ಡಿಸ್ಚಾರ್ಜ್ ಆಗಿದ್ದು, ಬೆಂಗಳೂರಿನಲ್ಲಿ 10,224 ಮಂದಿ ಡಿಸ್ಚಾರ್ಜ್ ಆಗಿದ್ದಾರೆ 1,58,274 ಮಂದಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.