ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1259 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 29 ಮಂದಿ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಒಂದು ದಿನದಲ್ಲಿ 295 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು 11 ಮಂದಿ ಅಸುನೀಗಿದ್ದಾರೆ. ನಿನ್ನೆ ಶೂನ್ಯ ಸಾವಿನ ಸಂಖ್ಯೆ ಇದ್ದ ನಗರದಲ್ಲಿ ಒಂದೇ ದಿನ 11 ಮಂದಿ ಮೃತಪಟ್ಟಿರುವುದು ಆತಂಕ ಮೂಡಿಸಿದೆ.
ರಾಜ್ಯದಲ್ಲಿ ಒಂದೇ ದಿನ 1711 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ರಾಜ್ಯದಲ್ಲಿ 19,784 ಸಕ್ರಿಯ ಪ್ರಕರಣಗಳಿವೆ.