ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,27,510 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 2,495 ಮಂದಿ ಸಾವನ್ನಪ್ಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ 1,27,510 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಒಟ್ಟಾರೆ ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,31,895ಕ್ಕೆ ಜಿಗಿತ ಕಂಡಿದೆ.
ಇನ್ನು ದೇಶದಲ್ಲಿ 18,95,520 ಸಕ್ರಿಯ ಪ್ರಕರಣಗಳಿದ್ದು, 2,59,47,629 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,55,287 ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ.