ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1291 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 40 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 266 ಸೋಂಕು ಪ್ರಕರಣಗಳು ಕಂಡು ಬಂದಿದ್ದು, 6 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 3015 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 27,527ಕ್ಕೆ ಇಳಿಕೆಯಾಗಿದೆ.