ಕೊರೊನಾ ಎರಡನೇ ಅಲೆಗೆ ದೇಶದ ಜನತೆ ತತ್ತರಿಸುತ್ತಿರುವ ಈ ಸಂದರ್ಭದಲ್ಲಿ ದೇಶಾದ್ಯಂತ ಸಾಮೂಹಿಕವಾಗಿ ಉಚಿತ ಲಸಿಕೆ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ 13 ಪ್ರಮುಖ ಪ್ರತಿಪಕ್ಷಗಳು ಪತ್ರ ಬರೆದಿವೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ಎನ್ ಸಿಪಿ ಶರದ್ ಪವಾರ್, ಶಿವಸೇನೆಯ ಉದ್ಧವ್ ಠಾಕ್ರೆ, ಟಿಎಂಸಿ- ಮಮತಾ ಬ್ಯಾನರ್ಜಿ ಸೇರಿದಂತೆ 13 ಪಕ್ಷಗಳು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು, ಸಾಮೂಹಿಕವಾಗಿ ಉಚಿತ ಲಸಿಕೆ ನೀಡುವಂತೆ ಆಗ್ರಹಿಸಿವೆ.
ದೇಶದಲ್ಲಿ ಕೊರೊನಾ ಅಟ್ಟಹಾಸ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಸಾಮೂಹಿಕವಾಗಿ ಉಚಿತ ಲಸಿಕೆ ನೀಡಬೇಕು. ಇದಕ್ಕಾಗಿ ಬಜೆಟ್ ನಲ್ಲಿ 35 ಸಾವಿರ ಕೋಟಿ ರೂ. ಮೀಸಲಿಡಬೇಕು ಎಂದು ಆಗ್ರಹಿಸಿವೆ.