ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,32,364 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 2,713 ಮಂದಿ ಸಾವನ್ನಪ್ಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,85,74,350 ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,85,74,350 ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,40,702 ಕ್ಕೆ ಜಿಗಿತ ಕಂಡಿದೆ.
ಇನ್ನು ದೇಶದಲ್ಲಿ 16,35,993 ಸಕ್ರಿಯ ಪ್ರಕರಣಗಳಿದ್ದು, 2,65,97,655 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,07,071 ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ.