ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,32,788 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 3,207 ಮಂದಿ ಸಾವನ್ನಪ್ಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,35,102ಕ್ಕೆ ಜಿಗಿತ ಕಂಡಿದೆ.
ಇನ್ನು ದೇಶದಲ್ಲಿ 17,93,645 ಸಕ್ರಿಯ ಪ್ರಕರಣಗಳಿದ್ದು, 2,61,79,085 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,31,456 ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ.