ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,34,154 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 2,887 ಮಂದಿ ಸಾವನ್ನಪ್ಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,84,41,986ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,84,41,986ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,37,989ಕ್ಕೆ ಜಿಗಿತ ಕಂಡಿದೆ.
ಇನ್ನು ದೇಶದಲ್ಲಿ 17,13,413 ಸಕ್ರಿಯ ಪ್ರಕರಣಗಳಿದ್ದು, 2,63,90,584 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,11,499 ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ.