ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ 136 ಮಂದಿ ಮೃತಪಟ್ಟಿದ್ದು, 8000ಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಹಲವಾರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದೆ.
ರೈಗಡ್, ರತ್ನಗಿರಿ, ಕರಾವಳಿ ಕೊಂಕನ್, ಪೂಣೆ, ಸತಾರಾ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಧೂದ್ ಸಾಗರ್ ಮತ್ತು ಗೋವಾ ನಡುವಿನ ರೈಲು ಹಳಿ ತಪ್ಪಿದ್ದು, ಕೂಡಲೇ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿ ಯಾವುದೇ ಪ್ರಾಣಹಾನಿ ಆಗದಂತೆ ಎಚ್ಚರಿಕೆ ವಹಿಸಲಾಗಿತು.